ಜ್ಞಾನವಂತರನ್ನಾಗಿ ಮಾಡುವ ಧರ್ಮಶಾಸ್ತ್ರ
97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ,
ದಿನವೆಲ್ಲಾ ಅದೇ ನನ್ನ ಧ್ಯಾನ.
98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ,
ಸದಾಕಾಲವೂ ಅವೇ ನನಗಿವೆ.
99 ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ,
ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
100 ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ,
ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.