Publicidade

Salmos 12

ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.

1 ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ.

ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ,

ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

4 ಅವರು, "ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ;

ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?" ಎಂದು ಹೇಳಿಕೊಳ್ಳುತ್ತಾರಲ್ಲಾ.

5 ಯೆಹೋವನು, "ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ;

ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು.

ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು.

ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು" ಎಂದು ಹೇಳುತ್ತಾನೆ.

6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ;

ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ,

ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

8 ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ,

ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

Veja também

Publicidade
Bíblia Online Bíblia Online

Bíblia Online • Versão: 2026-06-18_10-32-54-