Publicidade

Salmos 120

ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ
ಯಾತ್ರಾಗೀತೆ.

1 ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;

ಆತನು ಸದುತ್ತರವನ್ನು ದಯಪಾಲಿಸಿದನು.

2 ಯೆಹೋವನೇ, ಸುಳ್ಳು ಬಾಯಿಯೂ,

ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು?

ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

4 ಶೂರನ ಹದವಾದ ಬಾಣಗಳನ್ನೂ,

ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

5 ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ!

ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!

6 ಸಮಾಧಾನವನ್ನು ದ್ವೇಷಿಸುವವರೊಳಗೆ,

ಇದ್ದು ಇದ್ದು ಸಾಕಾಯಿತು.

7 ನಾನು ಸಮಾಧಾನಪ್ರಿಯನು;

ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

Veja também

Publicidade
Bíblia Online Bíblia Online

Bíblia Online • Versão: 2026-06-18_14-04-22-