Publicidade

Salmos 126

ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ
ಯಾತ್ರಾಗೀತೆ.

1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,

ನಾವು ಕನಸು ಕಂಡವರಂತೆ ಇದ್ದೆವು.

2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ,

ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು.

ಅನ್ಯಜನರು, "ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ" ಎಂದು

ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ;

ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

4 ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ,

ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.

5 ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,

6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,

ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

Veja também

Publicidade
Bíblia Online Bíblia Online

Bíblia Online • Versão: 2026-06-18_14-04-22-