ಭಕ್ತನ ಭಾಗ್ಯ
1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,
ನೀನು ಧನ್ಯನು, ನಿನಗೆ ಶುಭವಿರುವುದು.
3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,
ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
ಎಣ್ಣೇಮರದ ಸಸಿಗಳ ಹಾಗೆ ಇರುವರು.