Publicidade

Salmos 133

ಐಕಮತ್ಯವು ಶ್ರೇಷ್ಠವಾದುದು
ಯಾತ್ರಾಗೀತೆ; ದಾವೀದನದು.

1 ಆಹಾ, ಸಹೋದರರು ಒಂದಾಗಿರುವುದು,

ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!

2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು,

ಅವನ ಗಡ್ಡದ ಮೇಲೆಯೂ,

ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,

3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ,

ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ.

ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು,

ಯೆಹೋವನು ಆಜ್ಞಾಪಿಸಿದ್ದಾನೆ.

Veja também

Publicidade
Bíblia Online Bíblia Online

Bíblia Online • Versão: 2026-06-18_14-04-22-