ಸರ್ವಜ್ಞಾನಿ, ಸರ್ವವ್ಯಾಪಿ ಅದ ದೇವರು
1 ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
2 ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ,
ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
3 ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ,
ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
4 ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ,
ನೀನು ಅರಿಯದೆ ಇರುವಂಥದು ಒಂದೂ ಇಲ್ಲ.