Pular para o conteúdo
Publicidade

ಕೀರ್ತನೆಗಳು 139:13-18

IRVKAN Indian Revised Version (IRV) - Kannada - 2019

13 ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,

ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?

14 ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,

ನಿನ್ನನ್ನು ಕೊಂಡಾಡುತ್ತೇನೆ.

ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,

ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

15 ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,

ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ,

ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.

16 ನಾನು ಇನ್ನೂ ಕೇವಲ ಪಿಂಡವಾಗಿರುವಾಗ,

ನಿನ್ನ ಕಣ್ಣುಗಳು ನನ್ನನ್ನು ನೋಡಿದವು,

ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ,

ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.

17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ,

ಅವುಗಳು ಎಷ್ಟೋ ಅಸಂಖ್ಯವಾಗಿವೆ.

18 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ,

ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.

Em outras traduções

  1. OKCV Kannada Contemporary Version

    13 ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ;

    ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.

    14 ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ

    ನಾನು ನಿಮ್ಮನ್ನು ಸ್ತುತಿಸುತ್ತೇನೆ;

    ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,

    ನಾನು ಪೂರ್ಣವಾಗಿ ತಿಳಿದಿದ್ದೇನೆ.

    15 ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ,

    ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ

    ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.

    16 ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು;

    ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ

    ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.

    17 ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ!

    ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!

    18 ನಾನು ಅವುಗಳನ್ನು ಎಣಿಸಿದರೆ,

    ಅವು ಮರಳಿಗಿಂತಲೂ ಹೆಚ್ಚಾಗಿವೆ!

    ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.