Pular para o conteúdo
Publicidade

ಕೀರ್ತನೆಗಳು 145:8-12

IRVKAN Indian Revised Version (IRV) - Kannada - 2019

8 ಯೆಹೋವನು ದಯೆಯು, ಕನಿಕರವು ಉಳ್ಳವನು,

ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.

9 ಯೆಹೋವನು ಸರ್ವೋಪಕಾರಿಯು,

ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.

10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು,

ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.

11 ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು,

ನಿನ್ನ ಪ್ರತಾಪವನ್ನು ವರ್ಣಿಸುವರು.

12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ,

ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.

Em outras traduções

  1. OKCV Kannada Contemporary Version

    8 ಯೆಹೋವ ದೇವರು ಕೃಪಾಳುವೂ, ಅನುಕಂಪವೂ,

    ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.

    9 ಯೆಹೋವ ದೇವರು ಸರ್ವರಿಗೂ ಒಳ್ಳೆಯವರು.

    ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.

    10 ಯೆಹೋವ ದೇವರೇ, ನಿಮ್ಮ ನಂಬಿಗಸ್ತರು

    ನಿಮ್ಮನ್ನು ಸ್ತುತಿಸುವರು.

    11 ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು;

    ನಿಮ್ಮ ಪರಾಕ್ರಮವನ್ನು ನುಡಿಯುವರು.

    12 ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ,

    ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.