ಭೂಮ್ಯಾಕಾಶಗಳು ಯೆಹೋವನನ್ನು ಕೊಂಡಾಡಲಿ
1 ಯೆಹೋವನಿಗೆ ಸ್ತೋತ್ರ!
ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ,
ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
2 ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ,
ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
3 ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ,
ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.