Publicidade

Salmos 15

ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು
ದಾವೀದನ ಕೀರ್ತನೆ.

1 ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು?

ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?

2 ಅವನು ಸಜ್ಜನನೂ, ನೀತಿವಂತನೂ,

ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.

3 ಅವನು ಚಾಡಿಯನ್ನು ಹೇಳದವನೂ,

ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,

ಯಾರನ್ನೂ ನಿಂದಿಸದವನೂ ಆಗಿರಬೇಕು.

4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,

ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ,

ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ,

ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು.

ಇಂಥವನು ಎಂದಿಗೂ ಕದಲುವುದಿಲ್ಲ.

Veja também

Publicidade
Bíblia Online Bíblia Online

Bíblia Online • Versão: 2026-06-18_14-04-22-