3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,
ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ,
ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ;
17:3 ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ. ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ
ನಿನ್ನ ಮಾತನ್ನೇ ಅನುಸರಿಸಿದ್ದೇನೆ.
5 ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ;
ನನ್ನ ಕಾಲು ಜಾರಲಿಲ್ಲ.