ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ
1 ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ;
ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
2 ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು;
ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
4 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ;
ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ.
ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.
ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ;
ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;
ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು.
ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು;
ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ;
ಮನಸ್ಸನ್ನು ಹರ್ಷಪಡಿಸುತ್ತವೆ.
ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.