16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;
ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ.
ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
17 ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು;
ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
18 ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;
ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.