3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,
ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ
5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
8 ಯೆಹೋವನು, "ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು" ಎಂದು ಅನ್ನುತ್ತಾನಲ್ಲಾ.