26 ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ;
ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
27 ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ.
ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು,
ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.