Pular para o conteúdo
Publicidade

ಕೀರ್ತನೆಗಳು 70

ಸಂರಕ್ಷಣೆಗಾಗಿ ಪ್ರಾರ್ಥನೆ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.

ಕೀರ್ತ 40:13-17

1 ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು.

ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.

2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;

ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

3 ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು

ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.

4 ನಿನ್ನ ದರ್ಶನವನ್ನು ಕೋರುವವರೆಲ್ಲರು

ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;

ನಿನ್ನ ಜಯದಲ್ಲಿ ಆನಂದಿಸುವವರು, "ದೇವರು ಮಹೋನ್ನತನು" ಎಂದು ಯಾವಾಗಲೂ ಹೇಳಲಿ.

5 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;

ದೇವರೇ, ಬೇಗನೆ ಬಾ.

ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

Estes versículos te tocaram? Ore agora!

+581 estão orando agora.

Junte-se à corrente de oração.