17 ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ.
ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ;
ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು,
ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.