ಇಸ್ರಾಯೇಲರ ಉಪದೇಶಯುಕ್ತವಾದ ಪೂರ್ವಚರಿತ್ರೆ
1 ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ;
ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.
2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು.
ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
3 ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು,
ಅವರ ಸಂತಾನದವರಿಗೆ ಮರೆಮಾಡದೆ,
4 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,
ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
5 ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು,
ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು,
ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, "ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
6 ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ,
ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
7 ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ,
ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
8 ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು,
ನನ್ನ ಆಜ್ಞೆಗಳನ್ನು ಕೈಗೊಳ್ಳುವರು" ಎಂಬುದೇ.