Publicidade

Salmos 8

ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು.

1 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.

2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ

ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ,

ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ

ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,

ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,

4 ಮನುಷ್ಯನು ಎಷ್ಟು ಮಾತ್ರದವನು,

ಅವನನ್ನು ನೀನು ಏಕೆ ಸ್ಮರಿಸಬೇಕು?

ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

5 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;

ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ

ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,

8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು,

ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು,

ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.

9 ನಮ್ಮ ಕರ್ತನಾದ ಯೆಹೋವನೇ,

ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

Veja também

Publicidade
Bíblia Online Bíblia Online

Bíblia Online • Versão: 2026-06-15_21-32-39-