Publicidade

Salmos 82

ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು
ಆಸಾಫನ ಕೀರ್ತನೆ.

1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,

ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.

2 "ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,

ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,

ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ."

5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.

ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.

6 "ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,

7 ಆದರೂ ನರರಂತೆ ಸತ್ತೇ ಹೋಗುವಿರಿ,

ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ"

ಎಂದು ನಾನು ಹೇಳಿದೆನು.

8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು.

ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?

Veja também

Publicidade
Bíblia Online Bíblia Online

Bíblia Online • Versão: 2026-06-15_21-32-39-