Pular para o conteúdo
Publicidade

ಕೀರ್ತನೆಗಳು 93

ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು

ವಿಮೋ 15; ಯೆಶಾ 52:7; ಕೀರ್ತ 96; 97; 99

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;

ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ,

ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ;

ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

2 ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ;

ಯುಗಯುಗಾಂತರದಿಂದಲೂ ನೀನು ಇರುವಿ.

3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು;

ನದಿಗಳು ಘೋಷಿಸುತ್ತವೆ.

4 ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,

ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.

5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ;

ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

Estes versículos te tocaram? Ore agora!

+581 estão orando agora.

Junte-se à corrente de oração.