1 ದೇವರಿಗೂ 1:1 ರೋಮಾ. 1:1; 2 ಪೇತ್ರ. 1:1; ಯೂದ 1:ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ 1:1 ಅ. ಕೃ. 12:17:ಯಾಕೋಬನು ಅನ್ಯದೇಶಗಳಲ್ಲಿ 1:1 1 ಪೇತ್ರ. 1:1:ಚದುರಿರುವ ಇಸ್ರಾಯೇಲ್ಯರ 1:1 ಲೂಕ 22:30; ಅ. ಕೃ. 26:7:ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, "ನಿಮಗೆ ಶುಭವಾಗಲಿ." 2 ನನ್ನ ಸಹೋದರರೇ, ನೀವು 1:2 1 ಪೇತ್ರ. 1:6:ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ 1:2 ಮತ್ತಾ 5:12; ಅ. ಕೃ. 5:41; ಕೊಲೊ 1:11:ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. 3 ಏಕೆಂದರೆ 1:3 1 ಪೇತ್ರ. 1:7:ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ 1:3 ರೋಮಾ. 5:6; ಯಾಕೋಬ 5:11; ಇಬ್ರಿ. 10:36; 2 ಪೇತ್ರ. 1:6ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. 4 ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ 1:4 1 ಥೆಸ. 5:23; ಮತ್ತಾ 5:48:ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ. 5 1:5 1 ಅರಸು. 3:9-12; ಜ್ಞಾ. 2:3-6:ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, 1:5 ಮಾರ್ಕ 11:24; ಯೋಹಾ 14:13; 1 ಯೋಹಾ 3:22; 5:14,15:ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ. 6 ಆದರೆ ದೇವರ ಬಳಿ ಬೇಡುವವನು 1:6 ಮತ್ತಾ 21:21:ಸ್ವಲ್ಪವೂ ಸಂದೇಹಪಡದೆ 1:6 ಮಾರ್ಕ 11:24:ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು 1:6 ಯೆಶಾ 57:20; ಎಫೆ 4:14:ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ. 7 ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. 8 ಏಕೆಂದರೆ ಅವನು 1:8 ಯಾಕೋಬ. 4:8:ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
9 ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. 10 1:10 ಯೆರೆ 9:23:ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು 1:10 ಕೀರ್ತ 102:11; 1 ಕೊರಿ 7:31; 1 ಪೇತ್ರ. 1:24:ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. 11 1:11 ಯೆಶಾ 40. 7:ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
12 1:12 ಯಾಕೋಬ. 5:11; ಮತ್ತಾ 10:22; 1 ಪೇತ್ರ. 3:14: ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು 1:12 ಯಾಕೋಬ. 2:5:ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ 1:12 ಪ್ರಕ 2:10; 3:11; 1 ಕೊರಿ 9:25; 1 ಪೇತ್ರ. 5:4ಜೀವದ ಕಿರೀಟವನ್ನು ಹೊಂದುವನು. 13 ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ "ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು" ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ. 14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. 15 ಆ ಮೇಲೆ 1:15 ರೋಮಾ. 5:12; 6:23:ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು 1:15 ಯೋಬ. 15:35; ಕೀರ್ತ 7:14; ಯೆಶಾ 59:4:ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
16 ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ. 17 1:17 ಯೋಹಾ 3:27; 1 ಕೊರಿ 4:7:ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು 1:17 1 ಯೋಹಾ 1:5 ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; 1:17 ಮಲಾ. 3:6:ಆತನು ನೆರಳಿನಂತೆ 1:17 ಅಥವಾ, ಗ್ರಹಣದಂತಿರುವ ನೆರಳೂ. ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ. 18 ದೇವರು 1:18 ಯೋಹಾ 1:13:ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ 1:18 ಯೆರೆ 2:3; ಪ್ರಕ 14:4; ರೋಮಾ. 8:19-23; ಎಫೆ 1:12:ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
19 1:19 1 ಯೋಹಾ 2:21: ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ 1:19 ಪ್ರಸಂಗಿ 5:1,2:ಕಿವಿಗೊಡುವುದರಲ್ಲಿ ಚುರುಕಾಗಿಯೂ, 1:19 ಜ್ಞಾ. 10:19; 17:27:ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು 1:19 ಜ್ಞಾ. 14:29:ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. 20 ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 21 ಆದಕಾರಣ 1:21 ಕೊಲೊ 3:8; 1 ಪೇತ್ರ. 2:1:ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. 1:21 1 ಕೊರಿ 15:2; ಎಫೆ 1:13:ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. 22 ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ 1:22 ರೋಮಾ. 2:13; ಮತ್ತಾ 7:21,24-27; ಯೋಹಾ 13:17:ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. 23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. 24 ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. 25 ಆದರೆ 1:25 ಅಥವಾ, ಬಿಡುಗಡೆಯಾದವರಿಗೆ ಇರುವ. ಯೋಹಾ 8:32; ಗಲಾ. 2:4; 1 ಪೇತ್ರ. 2:16:ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ 1:25 ಕೀರ್ತ 1:1; ಲೂಕ 11:28:ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು. 26 ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ 1:26 ಕೀರ್ತ 39:1; 141:3:ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ. 27 ಸಂಕಟದಲ್ಲಿ ಬಿದ್ದಿರುವ 1:27 ಯೋಬ. 31:17,18; ಯೆಶಾ 1:7,23:ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ 1:27 1 ತಿಮೊ. 5:22; 2 ಪೇತ್ರ. 3:14; 1 ಯೋಹಾ 5:18:ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.