3 ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ 3:3 ಕೀರ್ತ 32:9:ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ. 4 ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ. 5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ 3:5 ಕೀರ್ತ 12:3,4; 73:8,9 ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. 6 3:6 ಕೀರ್ತ 120:2-4; ಜ್ಞಾ. 16:27:ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. 3:6 ಮತ್ತಾ 15:18:ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.
Publicidade