5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ 3:5 ಕೀರ್ತ 12:3,4; 73:8,9 ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. 6 3:6 ಕೀರ್ತ 120:2-4; ಜ್ಞಾ. 16:27:ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. 3:6 ಮತ್ತಾ 15:18:ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.