9 ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ 3:9 ಆದಿ 1:26:ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. 10 ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, 11 ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ? 12 ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
Publicidade