11 ಸಹೋದರರೇ, 4:11 2 ಕೊರಿ 12:20; 1 ಪೇತ್ರ. 2:1; ಯಾಕೋಬ 5:9:ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ 4:11 ಮತ್ತಾ 7:1; ಲೂಕ 6:37; ರೋಮಾ. 14:13; 1 ಕೊರಿ 4:5:ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. 12 4:12 ಯೆಶಾ 33:22; ಯಾಕೋಬ. 5:9:ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ 4:12 ಮತ್ತಾ 10:28:ನಾಶಮಾಡುವುದಕ್ಕೂ ಸಮರ್ಥನು. 4:12 ರೋಮಾ. 14:4:ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?