13 4:13 ಜ್ಞಾ. 27:1; ಲೂಕ 12:18-20: "ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ" ಎನ್ನುವವರೇ ಕೇಳಿರಿ. 14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? 4:14 ಕೀರ್ತ 102:3; ಯೋಬ. 7:7:ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. 15 ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು 4:15 ಅ. ಕೃ. 18:21:"ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು" ಎಂದು ಹೇಳಬೇಕು. 16 ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. 4:16 1 ಕೊರಿ 5:6:ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ. 17 ಹೀಗಿರುವುದರಿಂದ 4:17 ಯೋಹಾ 9:41; 15:22, 24; ಲೂಕ 12:47, 48; 2 ಪೇತ್ರ. 2:21:ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.