6 1:6 1 ತಿಮೊ. 3:1-4ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. 7 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, 1:7 1 ತಿಮೊ. 3:8; 1 ಪೇತ್ರ 5:2ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, 8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, 1:8 1 ಕೊರಿ 9:25ಜಿತೇಂದ್ರಿಯನೂ ಆಗಿದ್ದು, 9 ತಾನು 1:9 1 ತಿಮೊ. 1:10 ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ 1:9 2 ಥೆಸ. 2:13-15ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.