ಕ್ರೈಸ್ತರೆಲ್ಲರೂ ಸನ್ನಡತೆಯವರಾಗಿರಬೇಕೆಂಬ ಸ್ವಸ್ಥ ಬೋಧನೆ
1 ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು. 2 ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು. 3 ಹಾಗೆಯೇ, ವೃದ್ಧ ಸ್ತ್ರೀಯರು 2:3 1 ತಿಮೊ. 3:11ಚಾಡಿಹೇಳುವವರೂ 2:3 1 ತಿಮೊ. 3:8; 5:2ಮದ್ಯಕ್ಕೆ ಅಧೀನರು ಆಗಿರದೆ 2:3 1 ತಿಮೊ. 2:9ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. 4 ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, 2:4 1 ತಿಮೊ. 6:1ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ 5 2:5 1 ತಿಮೊ. 5:14ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ 2:5 ಆದಿ 3:16ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು. 6 ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು2:6 1 ತಿಮೊ 5:1. 7 ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ 2:7 2 ಕೊರಿ 11:3ಸತ್ಯವೂ 2:7 1 ತಿಮೊ 2:2ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ 2:7 1 ತಿಮೊ 6:3ಸುಬುದ್ಧಿಯೂ ಇರಬೇಕು; 8 2:8 ನೆಹೆ 5:9; 1 ತಿಮೊ 5:14; 1 ಪೇತ್ರ 2:12; 3:16ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.