27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ. 28 ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ. 29 ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿರುವುದಿಲ್ಲ.
Publicidade