Pular para o conteúdo
Publicidade

1 ಕೊರಿಂಥದವರಿಗೆ 12:1-7

ಆತ್ಮಿಕ ವರಗಳು

1 ಪ್ರಿಯರೇ, ಈಗ ಆತ್ಮಿಕ ವರಗಳನ್ನು ಕುರಿತು ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ. 2 ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ. 3 ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, "ಯೇಸು ಶಾಪಗ್ರಸ್ತನು," ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, "ಯೇಸು ಕರ್ತದೇವರು," ಎಂದು ಹೇಳಲಾರನು.

4 ಆತ್ಮಿಕ ವರಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಪವಿತ್ರಾತ್ಮರು ಒಬ್ಬರೇ. 5 ಸೇವೆಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಕರ್ತ ಆಗಿರುವವರು ಒಬ್ಬರೇ. 6 ಕಾರ್ಯರೀತಿಗಳಲ್ಲಿ ಬೇರೆ ಬೇರೆ ವಿಧಗಳಿವೆ, ಎಲ್ಲರಲ್ಲಿಯೂ ಎಲ್ಲಾ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬರೇ.

7 ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.

Estes versículos te tocaram? Ore agora!

+581 estão orando agora.

Junte-se à corrente de oração.