Pular para o conteúdo
Publicidade

1 ಕೊರಿಂಥದವರಿಗೆ 13:1-7

1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ. 2 ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ. 3 ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.

4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, 5 ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, 6 ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. 7 ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.

Estes versículos te tocaram? Ore agora!

+581 estão orando agora.

Junte-se à corrente de oração.