3 ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು, 4 ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು. 5 ಕೇಫನಿಗೂ15:5 ಅಥವಾ ಪೇತ್ರ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. 6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.
Publicidade