ದೇವಜನರಿಗಾಗಿ ಹಣ ಕೂಡಿಸುವುದು
1 ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ. 2 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ. 3 ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.