9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ:
"ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು
ಯಾವ ಕಣ್ಣೂ ಕಾಣಲಿಲ್ಲ,
ಯಾವ ಕಿವಿಯೂ ಕೇಳಲಿಲ್ಲ,
ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ."2:9 ಯೆಶಾಯ 64:4
10 ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ.
ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.