ಲೈಂಗಿಕ ಅನೈತಿಕತೆ
12 "ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ" ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ. 13 "ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ," ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.