9 ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು, 10 ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. 11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
Publicidade
Publicidade