11 ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ,
ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ.
ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ.
ಯೆಹೋವ ದೇವರೇ, ರಾಜ್ಯವು ನಿಮ್ಮದು.
ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.
12 ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ.
ನೀವು ಸಮಸ್ತವನ್ನು ಆಳಿಕೆಮಾಡುವವರು.
ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ.
ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.
14 "ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ. 15 ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.