ಲೋಕವನ್ನು ಪ್ರೀತಿಸಬೇಡಿರಿ
15 ಲೋಕವನ್ನಾಗಲಿ, ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. 16 ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ. 17 ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.