10 ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ. 11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. 12 ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.