11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. 12 ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
20 ಒಬ್ಬನು, "ನಾನು ದೇವರನ್ನು ಪ್ರೀತಿಸುತ್ತೇನೆ," ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು. 21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.