15 ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ. 16 ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ.
ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.