10 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11 ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.