ಪರಿಶುದ್ಧರಾಗಿರಿ
13 ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ. 14 ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.