6 ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. 7 ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು. 8 ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. 9 ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.