12 ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
13 ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು, 14 ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ.