ಸಭೆಯ ಹಿರಿಯರಿಗೂ ಸಭೆಯವರಿಗೂ
1 ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು. 2 ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ. 3 ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.