8 ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. 9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.
10 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.