12 ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು. 13 ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು.
ಆಗ, "ಎಲೀಯನೇ, ಇಲ್ಲಿ ಏನು ಮಾಡುತ್ತೀ?" ಎಂದು ವಾಣಿ ಕೇಳಿಸಿತು.